ಪಿ ಲಂಕೇಶ್

ಪಿ.ಲಂಕೇಶ್ - ಕನ್ನಡದ ಖ್ಯಾತ ಸಾಹಿತಿಗಳಲ್ಲೊಬ್ಬರು ಹಾಗೂ ಲಂಕೇಶ್ ಪತ್ರಿಕೆಯ ಸ್ಥಾಪಕ ಸಂಪಾದಕರು. ಮಾರ್ಚಿ ೮, ೧೯೩೫ ರಂದು ಶಿವಮೊಗ್ಗ ಜಿಲ್ಲೆಯ ಕೊನಗವಳ್ಳಿ ಗ್ರಾಮದಲ್ಲಿ ಜನಿಸಿದರು. ಬೆಂಗಳೂರು ಸೆಂಟ್ರಲ್ ಕಾಲೇಜಿನಿಂದ ಬಿ.ಎ. ಪದವಿಯನ್ನು ಹಾಗು ಮೈಸೂರು ವಿಶ್ವವಿದ್ಯಾಲಯ ದಿಂದ ಎಮ್.ಏ. ಪದವಿಯನ್ನು ಪಡೆದರು. ಬಳಿಕ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಆಂಗ್ಲ ಭಾಷೆಯ ಅಧ್ಯಾಪಕರಾಗಿ ವೃತ್ತಿ ಜೀವನ ಪ್ರಾರಂಭಿಸಿದರು. ೧೯೬೨ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾದರು. ೧೯೭೫ರ ಸುಮಾರಿಗೆ ಲಂಕೇಶರು ಅಧ್ಯಾಪಕ ವೃತ್ತಿಯನ್ನು ತ್ಯಜಿಸಿ ತಮ್ಮದೆ ಆದ ಲಂಕೇಶ್ ಪತ್ರಿಕೆ ಎಂಬ ವಾರಪತ್ರಿಕೆಯನ್ನು ಪ್ರಾರಂಭಿಸಿದರು. ಅನೇಕ ವೈಶಿಷ್ಟ್ಯಗಳನ್ನು ಒಳಗೊಂಡ ಈ ವಾರಪತ್ರಿಕೆ ತುಂಬ ಜನಪ್ರಿಯವಾಯಿತು.