- ಹಿಂದುಳಿದ ವರ್ಗಗಳ ಕಲ್ಯಾಣ ವಿಭಾಗ ಹಾಗೂ ತಾಲ್ಲೂಕು ಪಂಚಾಯತ್ ವತಿಯಿಂದ 1,2A,2B,3A,3B ಜಾತಿವರ್ಗಗಳಿಗೆ ಒಳಪಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ದೊರೆಯುತ್ತದೆ.
- ಎಸ್.ಸಿ/ಎಸ್.ಟಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯು ವಿದ್ಯಾರ್ಥಿವೇತನವನ್ನು ನೀಡುಲಾಗುತ್ತದೆ.
- ಸೈನಿಕ ಹಾಗು ಮಾಜಿ ಸೈನಿಕರ ಮಕ್ಕಳಿಗೆ ಸೈನಿಕ ಕಲ್ಯಾಣ ನಿಧಿಯಿಂದ ವಿದ್ಯಾರ್ಥಿವೇತನ ನೀಡಲಾಗುತ್ತದೆ.
- ಅಲ್ಪಸಂಖ್ಯಾತರ ಕಲ್ಯಾಣ ನಿಧಿಯಿಂದ ಮುಸ್ಲಿಂ,ಬುದ್ಧ,ಸಿಖ್, ಕ್ರಿಶ್ಚಿಯನ್ ಇತ್ಯಾದಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುತ್ತದೆ.
- ಮಹಿಳಾ ಮತ್ತು ಮಕ್ಕಳ ಕಲ್ಯಾಣ ನಿಧಿಯಿಂದ ವಿಕಲಾಂಗರಿಗೆ ವಿದ್ಯಾರ್ಥಿವೇತನ.
- ಕಾರ್ಮಿಕ ಕಲ್ಯಾಣ ನಿಧಿಯಿಂದ ಬಡ ಕಾರ್ಮಿಕರ(ಉದಾ:ಬೀಡಿ ಕಾರ್ಮಿಕರು, ಪ್ಲಾಂಟೇಷನ್ ಕಾರ್ಮಿಕರು)ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು.
- ಉಪ್ಪಾರ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಹಿಂದುಳಿದ ಜನಾಂಗ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
- ಉತ್ತಮ ಅಂಕಗಳಿಸುವ ವಿದ್ಯಾರ್ಥಿಗಳಿಗೆ ಜಿಂದಾಲ್ ಫೌಂಡೇಷನ್ ವತಿಯಿಂದ ವಿದ್ಯಾರ್ಥಿವೇತನ.
- ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಯೋಗ್ಯ ವಿದ್ಯಾರ್ಥಿಗಳಿಗೆ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿವೇತನವನ್ನು ನೀಡಲಾಗುವುದು.
- ಕಾಲೇಜು ಶಿಕ್ಷಣ ಆಯುಕ್ತರ ಕಛೇರಿಯಿಂದ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುವುದು.