ಕೇರಳದ ಕಾಸರಗೋಡಿನ ಕಾರಡ್ಕ ಗ್ರಾಮದಲ್ಲಿ ೧೯೪೦ ಸೆಪ್ಟಂಬರ್ ೧೨ ರಂದು ಜನನ. ಹೈದರಾಬಾದಿನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಅಂಡ್ ಫಾರಿನ್ ಲಾಂಗ್ವೇಜಸ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ. ಕಥೆ, ಕಾವ್ಯ, ಕಾದಂಬರಿ, ವಿಮರ್ಶೆ, ಅನುವಾದ, ನಾಟಕಗಳು ಸೇರಿದಂತೆ ಕನ್ನಡದಲ್ಲಿ 25ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಪ್ರಗತಿಪರ ಧೋರಣೆ, ವೈಚಾರಿಕ ಚಿಂತನೆಗಳನ್ನು ಮೈಗೂಡಿಸಿಕೊಂಡ ತಿರುಮಲೇಶ್ ಅವರ ಆಸಕ್ತಿಯ ವಿಷಯ ಕಾವ್ಯ ಮತ್ತು ಭಾಷಾ ವಿಜ್ಞಾನ.
ಅವಧ, ವಠಾರ, ಮುಖವಾಡಗಳು, ಪಾಪಿಯೂ ಎಂಬುವು ಮುಖ್ಯ ಕವನ ಸಂಕಲನಗಳು.
ಆರೋಪ, ಮುಸುಗು ಇವರ ಕಾದಂಬರಿಗಳು.
ನಾಯಕ ಮತ್ತು ಇತರರು ,ಕೆಲವು ಕಥಾನಕಗಳು, ಕಳ್ಳಿ ಗಿಡದ ಹೂ ಕಥಾಸಂಕಲನಗಳು.
ಬೇಂದ್ರೆಯವರ ಕಾವ್ಯಶೈಲಿ, ನಮ್ಮ ಕನ್ನಡ, ಅಸ್ತಿತ್ವವಾದ ಇವು ಇವರ ಮುಖ್ಯ ವಿಮರ್ಶಾ ಕೃತಿಗಳು.
ಮಾಲ್ಟ ಲೌರಿಡ್ಜ್ ಬ್ರಿಗ್ಗನ ಟಿಪ್ಪಣಿ ಪುಸ್ತಕ ಮತ್ತು ಪೂರ್ವ ಯಾನ ಇವರ ಅನುವಾದಿತ ಕೃತಿಗಳು.
ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ನಿರಂಜನ ಪ್ರಶಸ್ತಿ, ಕೇರಳದ ಕುಮಾರನ್ ಆಶಾನ್ ಪ್ರಶಸ್ತಿ, ಹಾಮಾನ ಪ್ರಶಸ್ತಿ, ರಾಷ್ಟ್ರಕವಿ ಗೋವಿಂದಪೈ ದತ್ತಿ ಪ್ರಶಸ್ತಿ, ಸಂದೇಶ ಪ್ರಶಸ್ತಿ,
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಗೌರವಗಳು ಸಂದಿವೆ.
ಓದಿರುವ ಕತೆಗಳು: