ನಾರ್ಬಟ್ ಡಿಸೋಜಾ ಮೂಲತ: ಸಾಗರದವರು. ೨೦೧೪ ಮಡಿಕೇರಿಯಲ್ಲಿ ನೆಡೆದ ೮೦ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು. ಇವರು ೪೦ಕ್ಕೂ ಹೆಚ್ಚು ಕಾದಂಬರಿಗಳು, ನಾಟಕಗಳು, ಸಣ್ಣಕತೆಗಳು ಒಳಗೊಂಡಂತೆ ೯೪ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಇವರ 'ಮುಳುಗಡೆಯ ಊರಿಗೆ ಬಂದವರು' ಎಂಬ ಮಕ್ಕಳ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ 'ಬಾಲ ಸಾಹಿತ್ಯ ಪುರಸ್ಕಾರ ಲಭಿಸಿದೆ. 'ದ್ವೀಪ' ಮತ್ತು 'ಕಾಡಿನ ಬೆಂಕಿ' ಕಾದಂಬರಿಗಳು ಚಲನಚಿತ್ರಗಳಾಗಿ ರಾಷ್ಟ್ರಿಯ ಪ್ರಶಸ್ತಿಯನ್ನು ಗಳಿಸಿವೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (೧೯೯೩), ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (೧೯೯೮), ಆಳ್ವಾಸ್ ನುಡಿಸಿರಿ ಪ್ರಶಸ್ತಿ (೨೦೦೬), ಕುವೆಂಪು ವಿಶ್ವವಿದ್ಯಾಲಯದ ಗೌರವಾನ್ವಿತ ಡಾಕ್ಟರೇಟ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಓದಿರುವ ಕತೆಗಳು :