ಶ್ರೀನಿವಾಸ ಎಂಬ ಕಾವ್ಯನಾಮದಿಂದ ಖ್ಯಾತರಾಗಿದ್ದ ಕನ್ನಡದ ಆಸ್ತಿ ಮಾಸ್ತಿಯವರು ಕೊಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಎಂಬಲ್ಲಿಜೂನ್ ೬, ೧೮೯೧ ರಲ್ಲಿ ಜನಿಸಿದರು. ಮದರಾಸು ವಿಶ್ವವಿದ್ಯಾಲಯದಲ್ಲಿ ಎಂ. ಎ ಪದವಿ ಪಡೆದು ಮೈಸೂರು ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಮೈಸೂರು ಸರ್ಕಾರದಲ್ಲಿ ಅಸಿಸ್ಟೆಂಟ್ ಕಮಿಷನರ್ ಆಗಿ ತಮ್ಮ ವೃತ್ತಿಯನ್ನು ಜೀವನವನ್ನು ಆರಂಭಿಸಿದರು. ಅನೇಕ ಕತೆ, ಕಾದಂಬರಿ, ಕಾವ್ಯ, ನಾಟಕ, ಪ್ರಬಂಧ, ಜೀವನ ಚರಿತ್ರೆ, ಸಂಪಾದನೆಗಳು, ಅನುವಾದಗಳನ್ನು ಬರೆಯುವುದರ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ.
ಓದಿರುವ ಕತೆಗಳು