ಸಂತ ಶಿಶುನಾಳ ಶರೀಫ.


ಶಿಶುನಾಳ ಶರೀಫರನ್ನು ಕರ್ನಾಟಕದ ಕಬೀರ್ ದಾಸ್ ಎಂದು ಕರೆಯಲಾಗುತ್ತದೆ. ಹಿಂದೂ, ಮುಸ್ಲಿಮರೆಂಬ ಭೇದವಿಲ್ಲದೆ ಎಲ್ಲರೂ ಅವರನ್ನು ಸಂತರೆಂದು ಪರಿಗಣಿಸಿದ್ದಾರೆ. ಕರ್ನಾಟಕದ ಮೊದಲನೆಯ ಮುಸ್ಲಿಂ ಕವಿ ಎಂಬ ಖ್ಯಾತಿ ಕೂಡ ಅವರಿಗಿದೆ.ಇಮಾಮ್ ಸಾಹೇಬ್ ಮತ್ತು ಹಾಜುಮಾ ಎಂಬ ದಂಪತಿಗಳ ಮಗನಾಗಿ ಜನಿಸಿದ ಶರೀಫರ ಹುಟ್ಟೂರು ಧಾರವಾಡ ಜಿಲ್ಲೆಯ ಶಿಶುನಾಳ ಎಂಬ ಚಿಕ್ಕ ಗ್ರಾಮ. ಅಲ್ಲಿಯೇ ಕನ್ನಡ ಮತ್ತು ಉದು ಕಲಿತು ಕನ್ನಡ ಉಪಾಧ್ಯಾಯನಾಗಿ ಸ್ವಲ್ಪ ಕಾಲ ಸೇವೆ ಸಲ್ಲಿಸಿದರು. ಶರೀಫರು ಫಾತೀಮಾ ಎಂಬಾಕೆಯನ್ನು ಮದುವೆಯಾದರು. ಒಂದು ಹೆಣ್ಣು ಮಗುವಾಯಿತು.ಸ್ವಲ್ಪ ಕಾಲದ ನಂತರ ಮಗು ತಾಯಿ ಇಬ್ಬರೂ ಗತಿಸಿದರು. ಶರೀಫರಿಗೆ ಜೀವನದಲ್ಲಿ ಬೇಸರವಾದರೂ, ದೇವರಲ್ಲಿ ನಂಬಿಕೆ ಉಳಿದಿತ್ತು. ತಾಳ್ಮೆಯಿಂದ ಸಜ್ಜನರ ಹಾಗೂ ವಿದ್ಯಾವಂತರ ಸಹವಾಸದಲ್ಲಿಯೇ ಕಾಲ ಕಳೆಯುತ್ತಾ ಬಂದರು. ತಮಗೆ ಸರಿಯಾಗಿ ಮಾರ್ಗದರ್ಶನ ನೀಡುವಂತಹ ಗುರುವಿಗಾಗಿ ಅವರು ಊರೂರು ಅಲೆದರು. ಕೊನೆಗೆ ಗೋವಿಂದ ಭಟ್ಟ ಎಂಬ ಗುರುವಿನಲ್ಲಿ ಸರಿಯಾದ ಮಾರ್ಗದರ್ಶನ ದೊರೆಯಿತು. ಯಾವುದೇ ಮತತ ಬಗ್ಗೆ ಮೂಡನಂಬಿಕೆ ಇಲ್ಲದ ಈ ಗುರುಗಳು ಶರೀಫರಿಗೆ ತುಂಬಾ ಮೆಚ್ಚುಗೆಯಾದರು. ಗುರುಶಿಷ್ಯರಿಬ್ಬರೂ ಮಸೀದಿಗಳಿಗೆ, ದೇವಾಲಯಗಳಿಗೆ ಸಂದರ್ಶನಕ್ಕಾಗಿ ಹೊರಟರು. ಶರೀಫರು ಅನೇಕ ಹಾಡುಗಳನ್ನು ರಚಿಸಿ ಹಾಡಿದರು. ಈ ಗುರುಗಳ ಜೊತೆಗೆ ನವಲಗುಂದದ ನಾಗಲಿಂಗಮತಿ ಮತ್ತು ಗಂಗೆಯ ಮಡಿವಾಳಪ್ಪ ಎಂಬುವರು ಸಹ ಶರೀಫರ ಮೇಲೆ ಹೆಚ್ಚಿನ ಪರಿಣಾಮ ಬೀರಿದರು. ಅಡವಿ ಸ್ವಾಮಿ ಹಾಗೂ ಸಿದ್ದಾರೂಢ ಸ್ವಾಮಿಗಳ ಪ್ರಭಾವವೂ ಅವರ ರಚನೆಗಳಲ್ಲಿ ಕಂಡುಬರುತ್ತದೆ.


  1. ಶಿಶುನಾಳ ಶರೀಫರ ಗೀತೆಗಳು.