ಡಾ.ಎಚ್.ಎಸ್.ವೆಂಕಟೇಶಮೂರ್ತಿ.
ವೆಂಕಟೇಶಮೂರ್ತಿಯವರು ೧೯೪೪ ಜೂನ್ ೨೩ರಂದು ಶಿವಮೊಗ್ಗ ಜಿಲ್ಲೆಯ ಹೊದಿಗ್ಗೆರೆ ಗ್ರಾಮದಲ್ಲಿ ಜನಿಸಿದರು. ತಂದೆ ನಾರಾಯಣ ಭಟ್ಟರು ಮತ್ತು ತಾಯಿ ನಾಗರತ್ನಮ್ಮ. ಚಿಕ್ಕಂದಿನಿಂದಲೂ ಕಾವ್ಯರಚನೆಯಲ್ಲಿ ಆಸಕ್ತಿ ಹೊಂದಿದ ಇವರು ಮಲ್ಲಾಡಿಹಳ್ಳಿಯ ಜೂನಿಯರ್ ಕಾಲೇಜಿನಲ್ಲಿ, ತರುವಾಯ ಬೆಂಗಳೂರಿನ ಸೇಂಟ ಜೋಸೆಫ್ ಕಾಲೇಜಿನಲ್ಲಿ ಅಧ್ಯಾಪಕ ವೃತ್ತಿಯನ್ನು ಕೈಗೊಂಡರು. ಇವರು ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಅಂದರೆ ಕಥೆ, ಕವನ, ಕಾದಂಬರಿ, ನಾಟಕ, ವಿಮರ್ಶೆ, ಅನುವಾದ, ಮಕ್ಕಳ ಸಾಹಿತ್ಯ ಇತ್ಯಾದಿಗಳಲ್ಲಿ ಕೃಷಿ ಮಾಡಿದ್ದಾರೆ ಹಾಗು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವಿ ಪಡೆದು, ಕನ್ನಡದಲ್ಲಿ ಕಥನ ಕವನಗಳು ಮಹಾಪ್ರಬಂಧ ಮಂಡಿಸಿ ಪಿ.ಎಚ್.ಡಿ ಪದವಿ ಪಡೆದುಕೊಂಡಿದ್ದಾರೆ.
ಕವನಗಳು
ಕವನಗಳು
ಹಕ್ಕಿಸಾಲು.
ಹೂವಿನ ಶಾಲೆ.
ಸೋನಿ ಪದ್ಯಗಳು.