ದಿನಾಂಕ 25/3/2025 ರಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯಲ್ಲಿ ಕನ್ನಡ ಚರ್ಚಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯ ತೃತೀಯ ಬಿಎ ವಿದ್ಯಾರ್ಥಿನಿಯರಾದ ನವ್ಯಶ್ರೀ ಮತ್ತು ಗೀತಾ ಇವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಶ್ರೀ ರತ್ನವರ್ಮ ಹೆಗ್ಗಡೆ ಸ್ಮಾರಕ ಪರ್ಯಾಯ ಫಲಕವನ್ನು ಹಾಗು 10‚000 ನಗದು ಬಹುಮಾನ ಪಡೆದು ಕಾಲೇಜಿನ ಘನತೆ ಇನ್ನೂ ಎತ್ತರಕ್ಕೆ ಬೆಳೆಯುವಲ್ಲಿ ಪಾತ್ರ ವಹಿಸಿರುತ್ತಾರೆ. ಇವರಿಗೆ ಕಾಲೇಜಿನ ಪರವಾಗಿ ತುಂಬು ಹೃದಯದ ಅಭಿನಂದನೆಗಳು.